District Incharge Minister Sharan Prakash Patil Visits Injured Policemen

ಪಿ.ಎಸ್.ಐ ಮತ್ತು ಪೇದೆಯ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಕಲಬುರಗಿ,ಅ.09.(ಕ.ವಾ.)-ಕಲಬುರಗಿ ನಗರದ ಹೊರವಲಯ ಡಬರಾಬಾದ ಗ್ರಾಮದ ಸಮೀಪ ಭಾನುವಾರ ಪೊಲೀಸರು ಮತ್ತು ರೌಡಿ ಶೀಟರ್‍ಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್.ಜೆ.ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಅಕ್ಕಮಹಾದೇವಿ ಮತ್ತು ಪೇದೆ ಪ್ರಹ್ಲಾದ್ ಕುಲಕರ್ಣಿ ಅವರನ್ನು ಸೋಮವಾರ ಭೇಟಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಜಿಲ್ಲೆಯಲ್ಲಿ ರೌಡಿ ಮತ್ತು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮಹಾನಗರ ಪಾಲಿಕೆಯ ಮಹಾಪೌರ ಶರಣಕುಮಾರ ಮೋದಿ, ಗಣ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಎನ್.ಶಶಿಕುಮಾರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಲೊಕೇಶ್ ಮತ್ತೀತರು ಉಪಸ್ಥಿತರಿದ್ದರು.

 

Comments
Facebooktwittergoogle_plusredditpinterestlinkedinmail

Leave a Reply

Facebook