KannadaStory: Senior Journalist , Writer Gauri Lankesh Murdered by unknown assailents

ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಗುಂಡಿಕ್ಕಿ ಹತ್ಯೆ

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್‌ ಅವರನ್ನು ಅವರ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಮೂವರು ದುಷ್ಕರ್ಮಿಗಳು ಇಂದು ಸಂಜೆ ಮನೆಯ ಹೊರಗಡೆ ನಿಂತಿದ್ದ ಗೌರಿ ಲಂಕೇಶ್ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದು, ಪತ್ರಕರ್ತೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ದೌಡಾಯಿಸಿದ್ದು, ಗೌರಿ ಲಂಕೇಶ್ ಅವರು ಮನೆಯ ಹೊರಗೆ ನಿಂತ ವೇಳೆ ಎದೆ ಹಾಗೂ ಹೃದಯ ಭಾಗಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಡಿಸಿಪಿ ಅನುಚೇತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಎಡಪಂಥೀಯ ವಿಚಾರಧಾರೆ ಹೊಂದಿದ್ದ ಗೌರಿ ಲಂಕೇಶ್ ಅವರು ತಂದೆ ಪಿ ಲಂಕೇಶ್ ಒಡೆತನದ ಲಂಕೇಶ್ ಪತ್ರಿ ನಡೆಸುತ್ತಿದ್ದರು.
Comments
Facebooktwittergoogle_plusredditpinterestlinkedinmail

Leave a Reply

Facebook