Siddu meets Lingayat seers, says no decision on separate Religion status until the community is unanimous in demand.

ಎಲ್ಲರೂ ಒಂದಾಗಿ ಬಂದರೆ ಪ್ರತ್ಯೇಕ ಧರ್ಮದ ವಿಚಾರ ತೀರ್ಮಾನ:ಸಿಎಂ
—————————————

ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪವಾಗಿದೆ. ಎಲ್ಲರೂ ಒಟ್ಟಾಗಿ ಬಂದರೆ ಈ ವಿಚಾರದಲ್ಲಿ ತೀರ್ಮಾನ ಮಾಡಬಹುದು ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪ್ರತ್ಯೇಕ ಧರ್ಮದ ವಿಚಾರವನ್ನು ನಾವು ಹುಟ್ಟು ಹಾಕಿದ್ದಲ್ಲ. ಪ್ರತ್ಯೇಕ ವಿಚಾರದಲ್ಲಿ ಹಲವಾರು ನಿಯೋಗಗಳು ಭೇಟಿಯಾಗಿವೆ. ಒಂದಾಗಿ ಬನ್ನಿ ಎಂದು ಎಲ್ಲರಿಗೂ ಹೇಳಿದ್ದೇನೆ, ಈಗಲೂ ಅದನ್ನೇ ಹೇಳುತ್ತೇನೆ. ಇದರಲ್ಲಿ ರಾಜಕೀಯವಾಗಿ ಲಾಭ ಮಾಡಿಕೊಳ್ಳುವ ಉದ್ದೇಶ ನಮಗಿಲ್ಲ, ನೀವೆಲ್ಲ ಕುಳಿತು ಚರ್ಚೆ ಮಾಡಿ ಒಮ್ಮತದ ನಿರ್ಧಾರಕ್ಕೆ ಬನ್ನಿ ಎಂದು ಮುಖ್ಯಮಂತ್ರಿಗಳು ಹೇಳಿದರು.

ವೀರಶೈವ ಲಿಂಗಾಯತ ಸಮನ್ವಯ ಸಮಿತಿ ಪದಾಧಿಕಾರಿಗಳು ಹಾಗೂ ವಿವಿಧ ಮಠಾಧೀಶರ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.

Comments
Facebooktwittergoogle_plusredditpinterestlinkedinmail

Leave a Reply

Facebook