Yadgir: Tense atmosphere in Shorapur after BJP-Congress groups clash on trivial issues, stone pelting reported

ಜಿಲ್ಲೆಯ ಸುರಪುರ ನಗರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನ. 17ರಂದು ರಾತ್ರಿ ಸುರಪುರದಲ್ಲಿ ಕ್ಷುಲ್ಲಕ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಎರಡೂ ಗುಂಪಿನ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುರಪುರದ ಶಾಸಕರು ಹಾಗೂ ಮಾಜಿ ಶಾಸಕ ಮನೆ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ 14 ಜನರ ಮೇಲೆ ದೂರು ದಾಖಲಾಗಿದ್ದು,  10 ಜನರನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್, ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಹೆಚ್ಚಿನ ಜನರನ್ನು ನಿಯೋಜಿಸಲಾಗಿದೆ.

Comments
Facebooktwittergoogle_plusredditpinterestlinkedinmail

Leave a Reply

Facebook